ಚನ್ನಪಟ್ಟಣ : ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅದರಂತೆ ಇಂದು ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದೆ. ಜನರಿಗೆ ಹಂಚಲು ತಯಾರು ಮಾಡಿಟ್ಟಿದ್ದ ಬಿರಿಯಾನಿಯನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ರಾಜಕೀಯ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಯೋಗೇಶ್ವರ ಟಿಕೆಟ್ ವಿಚಾರವಾಗಿ ಈ ಒಂದು ಸಭೆ ನಡೆಯುತ್ತಿತ್ತು. ಶಿಶಿರ ಹೋಂ ಸ್ಟೇ ಮೇಲೆ ರಾಮನಗರ ಎಸಿ ದಾಳಿ ಮಾಡಿದ್ದಾರೆ. ರಾಮನಗರ ಚುನಾವಣಾ ಅಧಿಕಾರಿ ದಾಳಿ ನಡೆಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಚನ್ನಪಟ್ಟಣದ ರೆಸಾರ್ಟ್ನಲ್ಲಿ ಕರೆಯಲಾಗಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸಿದ್ಧವಾಗಿದ್ದ ಬಿರಿಯಾನಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ದಾಳಿಮಾಡಿದ ಅಧಿಕಾರಿಗಳು ಬಿರಿಯಾನಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸುಮಾರು 500 ಜನರಿಗಾಗಿ ರೆಡಿಯಾಗುತ್ತಿದ್ದ ಬಾಡೂಟ ಸಂಪೂರ್ಣವಾಗಿ ಸೀಜ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟಕ್ಕೆ ಮುದ್ದೆ ಅನ್ನ ಸಾಂಬರ್ ರೆಡಿ ಮಾಡುತ್ತಿದ್ದು ಬೆಳಕಿಗೆ ಬಂದಿದೆ.ಅಲ್ಲದೆ ಮಟನ್ ಬೋಟಿ, ಮಟನ್ ಸುಕ್ಕ, ಚಿಕನ್ ಬಿರಿಯಾನಿ ಚಿಕನ್ ಕಬಾಬ್ ಘೀ ರೈಸ್, ಸೇರಿದಂತೆ ಇತರೆ ಅಹರ್ ಪದಾರ್ಥಗಳನ್ನು ಸೀಜ್ ಮಾಡಿದ್ದಾರೆ.