ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದೀಗ ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿಕೆಯು ತೀವ್ರ ಕುತೂಹಲ ಮೂಡಿಸಿದ್ದು, ಯಾವ ಸಮಯದಲ್ಲಾದರೂ ಚುನಾವಣೆ ಬರಬಹುದು. ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಕರೆ ನೀಡಿದ್ದಾರೆ.
ಇಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆ 2028ರಲ್ಲೇ ಬರಬಹುದು, 2026ರಲ್ಲಿ ಬರಬಹುದು, 2025ರಲ್ಲೇ ಚುನಾವಣೆ ಬರಬಹುದು. ಯಾವುದಕ್ಕೂ ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ಧರಾಗಿ ಎಂದು ಹೇಳಿದರು.
ಜನತೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನವಿದೆ. ಹಿಂದಿನ ಸರ್ಕಾರದ ಬಗ್ಗೆ ಆರೋಪ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಭಿವೃದ್ಧಿ ಕಾಣ್ತಾ ಇಲ್ಲ. ಜನ ಬೇಸತ್ತಿದ್ದಾರೆ. ಮುಂದಿನ ಮೂರೂವರೆ ವರ್ಷಗಳವರೆಗೆ ಅವಧಿ ಇದ್ದರೂ ಕಾಂಗ್ರೆಸ್ ನಾಯಕರ ತಪ್ಪಿನಿಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದರು.








