ಬೆಂಗಳೂರು : ಬೆಂಗಳೂರಿನ ಫ್ಲೈ ಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದ್ದು, ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಲ್ಲಿ ಕಾರೊಂದು ಕೆಟ್ಟು ನಿಂತಿತ್ತು, ಕಾರು ಟಾಯಿಂಗ್ ಮಾಡಬೇಕು ಎನ್ನುವ ವೇಳೆ ಟಾಟಾ ಏಸ್ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಎಲಿವೇಟೆಡ್ ಫ್ಲೈ ಓವರ್ ಅಧಿಕಾರಿ ಪಿ. ಮಂಜುನಾಥ್ (52) ಸಾವನ್ನಪ್ಪಿದ್ದಾರೆ.
ರಾತ್ರಿ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ನಲ್ಲಿ ಅಪಘಾತದಲ್ಲಿ 2 ಕಾರುಗಳು ಜಖಂ ಆಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.