ಬಾಗಲಕೋಟೆ : ಕಳೆದ ಕೆಲವು ಗಂಟೆಗಳ ಹಿಂದೆ ತಾನೆ ಮೈಸೂರಿನ ಹಳೆ ಕೋರ್ಟ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು.ಈಗ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಜಿಲ್ಲಾ ನ್ಯಾಯಾಲಯದ ಕಚೇರಿಗೆ ಇಮೇಲ್ ಬೆದರಿಕೆ ಸಂದೇಶ ಬಂದಿದೆ.
ಬಾಂಬ್ ಬೆದರಿಕೆ ಸಂದೇಶ ವಿಚಾರ ತಿಳಿದು ತಕ್ಷಣ ಸಿಬ್ಬಂದಿಗಳು ಹೊರಗಡೆ ಓಡಿ ಬಂದಿದ್ದಾರೆ. ಕೋರ್ಟ್ ನಿಂದ ನ್ಯಾಯವಾದಿಗಳು ಕಕ್ಷಿದಾರರು ಹಾಗೂ ಸಿಬ್ಬಂದಿಗಳು ತಕ್ಷಣ ಹೊರಗಡೆ ಬಂದಿದ್ದಾರೆ. ಜಿಲ್ಲಾ ನ್ಯಾಯಾಲಯದ ಹೊರ ಆವರಣದಲ್ಲಿ ಜನ ಜಮಾಯಿಸಿದ್ದಾರೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಮೈಸೂರು ಬಾಗಲಕೋಟೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಪಾಸ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಪಾಸ್ಪೋರ್ಟ್ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಇಮೇಲ್ ಮಾಡಿ ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ವಿಲ್ಸನ್ ಗಾರ್ಡನ್, ಎಸ್ ಆರ್ ನಗರ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ.








