ಬೆಂಗಳೂರು : ಬೆಂಗಳೂರlli ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದೆ ಬೆಂಗಳೂರಿನ ಆರ್ ಟಿ ಓ ಕಚೇರಿಗಳನ್ನು ಸ್ಪೋಟಿಸುವುದಾಗಿ ಇಮೇಲ್ ಮೂಲಕ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸಿದ್ದಾನೆ.
ಕಸ್ತೂರಿ ನಗರ, ಜ್ಞಾನಭಾರತಿ, ತಲಘಟ್ಟಪುರ, ಎಚ್ಎಸ್ಆರ್ ಲೇಔಟ್ ಸೇರಿದಂತೆ ಬೆಂಗಳೂರು ನಗರದ ಹಲವು ಆರ್‌ಟಿಓ ಕಚೇರಿಗಳಿಗೆ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸದು ಆರ್ ಟಿ ಓ ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಪರಿಶೀಲನೆ ವೇಳೆ ಯಾವ ಆರ್‌ಟಿಓ ಕಚೇರಿಗಳಲ್ಲೂ ಬಾಂಬ್ ಪತ್ತೆಯಾಗಿಲ್ಲ.ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಒಂದು ಇಮೇಲ್ ಸಂದೇಶ ಬಂದಿದೆ.








