ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ದೇವಗಿರಿ ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಉಲ್ಲಾಸ್ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಮೃತ ಉಲ್ಲಾಸ್, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.