ಬೆಂಗಳೂರು : ಉಪಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಶಾಸಕರು ಈಗ ಅಲರ್ಟ್ ಆಗಿದ್ದಾರೆ. ರಾಜ್ಯ ಸಚಿವ ಸಂಪುಟ ಪುನರಚನೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ಇದೀಗ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಿದೆ. ಏಪ್ರಿಲ್ 17ರ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೈಕಮಾಂಡ್ ಅವರನ್ನು ಭೇಟಿಯಾಗಲಿದ್ದಾರೆ.
ಆದರೆ ಅದಕ್ಕೂ ಮುನ್ನವೇ ಹಿರಿಯ ಶಾಸಕರು ದೆಹಲಿ ಯಾತ್ರೆ ಕೈಗೊಳ್ಳಲಿದ್ದು ನಾಳೆ ಕಾಂಗ್ರೆಸ್ಸಿನ 20 ಕ್ಕೂ ಹೆಚ್ಚು ಶಾಸಕರು ದೆಹಲಿಗೆ ತೆರಳಲಿದ್ದಾರೆ ಅಶೋಕ್ ಪಟ್ಟಣ ಟಿಬಿ ಜಯಚಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ದೆಹಲಿ ಪ್ರಯಾಣ ಬೆಳೆಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ ರಣದೀಪ ಸಿಂಗ ಸುರ್ಜೆವಾಲಾ ಬೇಟಿಗೆ ಶಾಸಕರು ಸಿದ್ಧತೆ ನಡೆಸಿದ್ದಾರೆ.
ಪಕ್ಷಕ್ಕಾಗಿ ನಾವು ಇಷ್ಟು ವರ್ಷ ದುಡಿದಿದ್ದೇವೆ. ನಮಗೂ ಒಮ್ಮೆ ಸಚಿವರ ಆಗುವ ಆಸೆ ಇದೆ. ಎರಡೂವರೆ ವರ್ಷದ ಬಳಿಕ ಅವಕಾಶ ಕೊಡುತ್ತೀವಿ ಅಂತ ಹೇಳಲಾಗಿತ್ತು. ಸರ್ಕಾರ ರಚನೆಯಾಗಿ ಮೂರು ವರ್ಷ ಕಳೆಯುತ್ತಾ ಬಂದಿದೆ ಇನ್ನುಳಿದ ಎರಡು ವರ್ಷ ಕಾದರೂ ನಮಗೆ ಸಚಿವ ಸ್ಥಾನ ಕೊಡಿ ಈ ಸಂಬಂಧ ಸಂಪುಟ ಪುನರ್ ರಚನೆಗೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ಕೊಡಿ ಎಂದು ಮನವಿ ಮಾಡಲಿದ್ದಾರೆ.
ನಾಯಕತ್ವ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟದ್ದು. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಆದರೆ ನಮಗೆ ಸಚಿವ ಸ್ಥಾನ ಕೊಡಿ ಎಂದು ಕಾಂಗ್ರೆಸ್ ಶಾಸಕರು ಮನವಿ ಮಾಡಲಿದ್ದಾರೆ. ಕಳೆದ ತಿಂಗಳು ಬೌಲಿಂಗ್ ಕ್ಲಬ್ ನಲ್ಲಿ 40 ಶಾಸಕರು ಸಭೆ ಸೇರಿದರು. ಮೂರರಿಂದ ಆರು ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳು ಮುನ್ನವೇ ಕಾಂಗ್ರೆಸ್ ಶಾಸಕರು ನಾಳೆ ದೆಹಲಿಯಾತ್ರೆ ಕೈಗೊಳ್ಳಲಿದ್ದಾರೆ.








