ಬೆಂಗಳೂರು : ಲಾರಿ ಚಾಲಕನೊಬ್ಬ ನನ್ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಮಾಜಿ ಬಿಗ್ ಬಾಸ್ ಸ್ಪರ್ಧಿ ಆಡಂ ಪಾಷಾ ಎಲೆಕ್ಟ್ರಾನಿಕ್ ಸಿಟಿ ಠಾಣೆಗೆ ದೂರು ಸಲ್ಲಿಸಿದರು ಆದರೆ ಪೊಲೀಸ್ ಅಧಿಕಾರಿಗಳು ಘಟನೆ ಕೋರಿದಂತೆ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಈಗ ಆಡಂಪಾಷ ಕಳ್ಳಾಟ ಬಯಲಾಗಿದ್ದು, ಆತನ ವಿರುದ್ಧ ಇದೀಗ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಎಫ್ಐಆರ್ ದಾಖಲಿಸುವ ವೇಳೆ ಆಡಂ ಪಾಷಾ ರಾಂಗ್ ನಂಬರ್ ಕೊಟ್ಟಿದ್ದಾರೆ. ತನಿಖೆ ವೇಳೆ ಆಡಂ ಪಾಷಾ ಸುಳ್ಳು ದೂರು ಕೊಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ತನಿಖೆ ಚುರುಕುಗೊಳಿಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಆಡಂ ಪಾಷಾ ಕಳ್ಳಾಟ ಬಯಲಾಗಿದೆ. ತನ್ನ ಬಟ್ಟೆಗಳನ್ನ ತಾನೇ ಹರಿದುಕೊಂಡು ಬಂದು ದೂರು ಕೊಟ್ಟಿರುವುದು ತಿಳಿದುಬಂದಿದೆ.
ಈ ಹಿನೆಲೆಯಲ್ಲಿ ಸುಳ್ಳು ದೂರನ್ನು ಕೊಟ್ಟ ಆಡಂ ಪಾಷಾ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಿ ಎಂದು ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ ಆದ್ದರಿಂದ ಆಡಂ ಪಾಷಾ ಬಂಧನದ ಭೀತಿ ಶುರುವಾಗಿದೆ ಎಂದೇ ಹೇಳಲಾಗುತ್ತಿದೆ.