ಬಾಗಲಕೋಟೆ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಆನಂದ್ ನ್ಯಾಮಗೌಡ ಶೀಘ್ರದಲ್ಲಿ ಬಿಜೆಪಿಯ ಮಾಜಿ ಸಿಎಂ ಅಶ್ಲೀಲ ವಿಡಿಯೋ ಬಿಡುಗಡೆಯಾಗಲಿದೆ ಎಂದು ಹೊಸ ಬಾಂಬ್ ಸಿಡಿಸದರು.
ಮಾಜಿ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಈ ಒಂದು ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಮಾಜಿ ಸಿಎಂ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆಯಾಗುವುದಿದೆ. ಇವತ್ತು ಒಂದು ಹೊಸ ಸುದ್ದಿ ಬಂದಿದೆ. ರಾಜ್ಯದ ಮಾಜಿ ಸಿಎಂ ಅವರ ಅಶ್ಲೀಲ ಸಿಡಿ ಬರುವುದಿದೆ. ಆ ಅಶ್ಲೀಲ ಸಿಡಿ ಭಾರತೀಯ ಜನತಾ ಪಕ್ಷದ ನಾಯಕನದ್ದೇ ಆಗಿದೆ. ಆ ಮಾಜಿ ಸಿಎಂ ಅಶ್ಲೀಲ ಸಿಡಿ ಶೀಘ್ರ ಬಿಡುಗಡೆಯಾಗುತ್ತದೆ ಎಂದು ಕಾಂಗ್ರೆಸ್ ಮಾಡಿ ಶಾಸಕ ಆನಂದನೆಗಳು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಇಂದು ರಾಜ್ಯಪಾಲರ ನಡೆ, ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಳೆ ತಹಶಿಲ್ದಾರ್ ಕಚೇರಿಯಿಂದ ಪ್ರತಿಭಟನಾ ರ‍್ಯಾಲಿ ಆರಂಭವಾಯಿತು.ಬಳಿಕ ಜಮಖಂಡಿಯ ದೇಸಾಯಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.