ನವದೆಹಲಿ: ದೆಹಲಿ ಅಬಕಾರಿ ನೀತಿ 2021-22 ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ವಿಚಾರಣೆಗೆ ಒಳಪಡಿಸಲು ಕೇಂದ್ರ ತನಿಖಾ ದಳ (CBI) ಅಗತ್ಯ ಅನುಮತಿಯನ್ನ ಪಡೆದುಕೊಂಡಿದೆ.
ವರದಿ ಪ್ರಕಾರ, ಏಜೆನ್ಸಿಯು ರೂಸ್ ಅವೆನ್ಯೂ ನ್ಯಾಯಾಲಯದಲ್ಲಿ ಅನುಮತಿಯನ್ನ ಪಡೆದುಕೊಂಡಿದೆ. ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಅಗತ್ಯವಿದೆ.
ಸಿಬಿಐ ಅವರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ. ಜೂನ್ 26ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ನ್ಯಾಯಾಲಯವು ಪೂರಕ ಆರೋಪವನ್ನು ಆಗಸ್ಟ್ 27ರಂದು ಪರಿಗಣಿಸಲಿದೆ.
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭ