ಮೈಸೂರು : ಮೈಸೂರಿನ ಅರಮನೆಯ ಎದುರು ಜಯ ಮಾರ್ಯಾಂಡ ದ್ವಾರದ ಬಳಿ ಬಲೂನ್ ಗೆ ಹೀಲಿಯಂ ತುಂಬುವ ಸಿಲಿಂಡರ್ ಸ್ಫೋಟ ದುರಂತದಲ್ಲಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಸ್ಪೋಟದಿಂದ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರ ಬೀದಿ ನಿವಾಸಿ ಮಂಜುಳಾ(28), ಬೆಂಗಳೂರಿನ ಬ್ಯಾಡರಹಳ್ಳಿ ಲಕ್ಷ್ಮಿ(41) ಶುಕ್ರವಾರ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಉತ್ತರ ಪ್ರದೇಶದ ಜಿಲ್ಲೆಯ ತೋಫಿಯಾ ಗ್ರಾಮದ ಸಲೀಂ(40) ಅರಮನೆ ಸಮೀಪ ಸೈಕಲ್ ನಲ್ಲಿ ಹೀಲಿಯಂ ಬಲೂನ್ ಮಾರುತಿದ್ದಾಗ ಸ್ಪೋಟ ಸಂಭವಿಸಿ ಮೃತಪಟ್ಟಿದ್ದರು. ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.
ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರಿ ಅನಾಹುತ ಸಂಭವಿಸಿತ್ತು ಘಟನೆಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಸಲೀಂ ಸಾವನ್ನಪ್ಪಿದ್ದ ಆದರೆ ಗಂಭೀರವಾಗಿ ಗಾಯಗೊಂಡ ಮಂಜುಳಾ, ಲಕ್ಷ್ಮಿ(41) ಇದೀಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಘಟನೆ ಹಿನ್ನೆಲೆ
ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದರು. ಗಾಯಗೊಂಡಿರುವ ಐದು ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಕ್ರಿಸ್ಮಸ್ ಸಂಭ್ರಮದಲ್ಲಿ ಮುಳುಗಿದ್ದ ಸಾಂಸ್ಕೃತಿಕ ನಗರಿ ಮೈಸೂರು ಈ ಘಟನೆಯಿಂದ ಬೆಚ್ಚಿಬಿದ್ದಿದೆ.








