ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೇ. ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಒಂದು ಬ್ಯಾಗಿನಲ್ಲಿ ಜಿಲೇಟಿನ್ ಕಡ್ಡಿಗಳು ಪತ್ತೆ ಆಗಿವೆ ಎಂದು ತಿಳಿದುಬಂದಿದೆ.
ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಶೌಚಾಲಯದಲ್ಲಿ ಒಂದು ಬ್ಯಾಗ್ ನಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ . ಪೊಲೀಸರು, ಶ್ವಾನದಳ, ಮತ್ತು ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ಬ್ಯಾಗಿನಲ್ಲಿ ಜಿಲೇಟಿನ್ ಕಡ್ಡಿಗಳು ಪತ್ತೆಯಾಗಿವೆ. ಬಸ್ ನಿಲ್ದಾಣದ ಮೂಲೆ ಮೂಲೆಯಲ್ಲೂ ಪೊಲೀಸರು ಇದೀಗ ತಪಾಸಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.