ಬೆಂಗಳೂರು : ಚಿತ್ರದುರ್ಗದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ತಿರುವು ಪಡೆದುಕೊಂಡಿದ್ದು ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವ ಸಂದರ್ಭದಲ್ಲಿ ನಟ ದರ್ಶನವರೇ ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದಾರೆ. ನಟ ದರ್ಶನ್ ಅವರು ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದರಿಂದಲೇ ಆತ ಸಾವನಪ್ಪಿದ್ದಾನೆ ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಹೌದು ಈ ಒಂದು ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದ್ದು, ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಆರ್ ಆರ್ ನಗರದ ಪಟ್ಟಣಗೆರೆ ಶೆಡ್ ಗೆ ಕರೆದುಕೊಂಡು ಬಂದಾಗ ನಟ ದರ್ಶನ್ ರೇಣುಕಾ ಸ್ವಾಮಿ ಮರ್ಮಾಂಗಕ್ಕೆ ಒದಿದ್ದರಿಂದಲೇ ರೇಣುಕಾ ಸ್ವಾಮಿ ಮೃತಪಟ್ಟಿದ್ದಾನೆ ಎಂದು ಮತ್ತೊಬ್ಬ ಆರೋಪಿಯಾದ ದೀಪಕ್ ಪೊಲೀಸರ ಎದುರು ಬಾಯಿಬಿಟ್ಟಿದ್ದಾನೆ ಎಂಬ ಸ್ಪೋಟಕ ಮಾಹಿತಿ ಬೆರಂಗವಾಗಿದೆ.
ಈಗಾಗಲೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐ ವಿಟ್ನೆಸ್ ಗಾಗಿ ದೀಪಕ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಹಾಗಾಗಿ ದೀಪಕ್ ಈ ಒಂದು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿದ್ದು ಕೋರ್ಟ್ ನಲ್ಲಿ ಕೂಡ ಇದೇ ರೀತಿ ಹೇಳುವಂತೆ ಪೊಲೀಸರು ವಿಚಾರಣೆಯಲ್ಲಿ ಆತನಿಗೆ ತಿಳಿಸಿದ್ದಾರೆ. ವಿತರಣೆ ವೇಳೆ ಏನು ಹೇಳಿದಿಯೋ ಕೂಡ ಅದೇ ರೀತಿ ಹೇಳಿಕೆ ನೀಡಬೇಕು ಎಂದು ತಿಳಿಸಿದ್ದಾರೆ.164 ಹೇಳಿಕೆ ಪಡೆದುಕೊಳ್ಳುವುದಕ್ಕೆ ಪೊಲೀಸರು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.