ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿದ್ದು ಅಲ್ಲದೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿರುವ ನೋಟಿಸ್ ಗೂ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶಿಸಿದೆ.
ಶಾಸಕ ಯತ್ನಾಳರನ್ನು ಉಚ್ಚಾಟಿಸಿದ ಬೆನ್ನಲ್ಲೇ ಇದೀಗ ಯತ್ನಾಳ್ ಅಭಿಮಾನಿಗಳು ಇಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಜಯಪುರದ ಗಾಂಧಿಚೌಕ್ ನಲ್ಲಿ ಯತ್ನಾಳ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದದಾರೆ..
ಇನ್ನು ಯತ್ನಾಳ್ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಓಬಿಸಿ ಮೋರ್ಚ ಉಪಾಧ್ಯಕ್ಷ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶಾಳ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಹೂಗಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ವಾಟ್ಸಪ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದು, ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದೆ. ಬಿಜೆಪಿ ವಿಜಯಪುರ ನಗರ ಓಬಿಸಿ ಮೂರ್ಛೆ ಉಪಾಧ್ಯಕ್ಷ ಭೀಮು ಮಾಶಾಳ ರಾಜೀನಾಮೆ ಸಲ್ಲಿಸಿದ್ದಾರೆ.