ಬೆಂಗಳೂರು : ಭಿಕ್ಷೆ ಬೇಡುವ ನೆಪದಲ್ಲಿ ಬ್ಯಾಂಕ್ ಉದ್ಯೋಗಿಯೊಬ್ಬರ ಡೈಮಂಡ್ ರಿಂಗ್ ಎಗರಿಸಿದ್ದ ನಕಲಿ ಬಾಬಾನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಗುಜರಾತ್ ಮೂಲಕ ನಕಲ ಬಾಬಾ ಸಾಲತ್ ದಿಲೀಪ್ ಎಂಬಾತ ಬೆಂಗಳೂರಿನ ಪ್ರತಿಷ್ಠಿತ ರಸ್ತೆಗಳಲ್ಲಿ ಭಿಕ್ಷೆ ಬೇಡುತ್ತಿದ್ದ. ಭಿಕ್ಷೆ ಬೇಡುವ ನೆಪದಲ್ಲಿ ಬ್ಯಾಂಕ್ ಉದ್ಯೋಗ ಉಜ್ವಲ್ ಎಂಬುವವರ ಬಳಿ ಡೈಮೆಂಡ್ ರಿಂಗ್ ಎಗರಿಸಿ ಪರಾರಿಯಾಗಿದ್ದ. ಇದೀಗ ನಕಲ ಬಾಬಾ ಸಾಲತ್ ದಿಲೀಪ್ ನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜನವರಿ 10ರಂದು ಚರ್ಚ್ ಸ್ಟ್ರೀಟ್ ನಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಆರೋಪಿ ಬ್ಯಾಂಕ್ ಉದ್ಯೋಗಿ ಉಜ್ವಲ್ ಬಳಿ ಬಂದು ಭಿಕ್ಷೆ ಕೇಳಿದ್ದಾನೆ. ಅವರು ಕೊಡಲು ನಿರಾಕರಿಸಿದಾಗ ಕೈಯಲ್ಲಿದ್ದ ನಾಲ್ಕೂವರೆ ಲಕ್ಷ ರೂ. ಮೌಲ್ಯದ ಡೈಮಂಡ್ ರಿಂಗ್ ಬಾಯಲ್ಲಿಟ್ಟುಕೊಂಡು ಪರಾರಿಯಾಗಿದ್ದಾನೆ.
ಉಜ್ವಲ್ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿ ನಕಲಿ ಬಾಬಾನನ್ನು ಬಂಧಿಸಲಾಗಿದೆ. ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.