ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಹುಸಿ ಬಾಂಬ್ ಕರೆ ಬಂದಿದ್ದು, ಕೂಡಲೇ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಹುಸಿ ಬಾಂಬ್ ಕರೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಸಿಂಗ್ ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದು ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ತಡರಾತ್ರಿ 1 ಗಂಟೆ ಸುಮಾರಿಗೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಡಿ ಪೊಲೀಸರು ರೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ರಾತ್ರಿ 1:30ರವರೆಗೆ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢವಾಗಿದೆ. ಕೂಡಲೇ ತನಿಖೆ ನಡೆಸಿದ ಪೊಲೀಸರು ಆರೋಪಿ ದೀಪಕ್ ಸಿಂಗ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.