ಬೆಂಗಳೂರು : ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂ ಗೆ ಇಮೇಲ್ ಮುಖಾಂತರ ಉಸಿಬಾಂಬ್ ಬೆದರಿಕೆ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಈ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಪೊಲೀಸರ ಪರಿಶೀಲನೆ ಬಳಿಕ ಹುಸಿ ಮೇಲ್ ಎಂಬುದು ಪತ್ತೆಯಾಗಿದೆ. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಿದ್ದರು.
ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತದೆ ಎಂದು‘ Morgue999lol’ ಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ ಹೆಸರನ್ನು ಉಲ್ಲೇಖಿಸಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದರು. ಈ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದಾದ ಬೆನ್ನಲ್ಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಆರೋಪಿಗಳು ಜನವರಿ 3ರಂದು ಮುಂಬೈನ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕಚೇರಿಗೆ ಕರೆ ಮಾಡಿ, ಬೆಂಗಳೂರಿನ ಕಚೇರಿಯಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಿದ್ದಾರೆ.
ಕೂಡಲೇ ಮುಂಬೈನ ಎನ್ಎಸ್ಇ ಕಚೇರಿ ಅಧಿಕಾರಿಗಳು ಮಧ್ಯರಾತ್ರಿ ಒಂದು ಗಂಟೆಗೆ ಸುಮಾರಿಗೆ ವಿಧಾನಸೌಧ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಯಾವುದೇ ಸ್ಪೋಟಕವಸ್ತು ಪತ್ತೆಯಾಗಿಲ್ಲ. ಸದ್ಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.