ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿ ವಿರುದ್ಧ ಅಪಪ್ರಚಾರದ ಪ್ರಕರಣವನ್ನು ರದ್ದುಗೊಳಿಸುವ ಮೂಲಕ, ರಿಲೀಫ್ ನೀಡಿದೆ.
ವಿಧಾನಸಭೆ ಚುನಾವಣೆ ವೇಳೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಅವರ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿದೆ.
ಅಂದಹಾಗೇ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ್ದಂತ ಕರಪ್ಷನ್ ರೇಟ್ ಕಾರ್ಡ್ ಜಾಹೀರಾತು ಸಂಬಂಧ ಬಿಜೆಪಿ ಪರವಾಗಿ ಕೇಶವಪ್ರಸಾದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅರ್ಜಿಯನ್ನು ವಿಚಾರಣೆ ನಡೆಸಿ ಪ್ರಕರಣ ರದ್ದುಪಡಿಸಿದೆ.








