ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲಾಗಿದೆ.
ಇನ್ನು ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಆ ರೀತಿ ಸುಳ್ಳ ಕೇಸ್ ಗಳು ಹಾಕಿದರು ಅದಕ್ಕೆಲ್ಲ ಉತ್ತರ ಕೊಡಲು ನಮಗೆ ಶಕ್ತಿ ಇದೆ. ಸುಳ್ಳು ಕೇಸ್ ಗಳು ಯಾವುದೇ ಕಾರಣಕ್ಕೂ ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ ಎಂದು ತಿಳಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಹಿ ಕೃಷ್ಣ ಎಂಬುವವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಆರೋಪಿಯನ್ನಾಗಿಸಿ ಇದೀಗ ಖಾಸಗಿ ದೂರು ಸಲ್ಲಿಸಿದ್ದಾರೆ. ಖಾಸಗಿ ದೂರು ಸಂಬಂಧ ನಾಳೆ ಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಪ್ರಾಸಿಕ್ಯೂಷನ್ ಗೆ ಅನುಮತಿ ಪಡೆಯದೆ ಖಾಸಗಿ ದೂರು ಸಲ್ಲಿಸಲಾಗಿದೆ.