ಬೆಂಗಳೂರು : ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ, ನಿರ್ಮಾಪಕ ನರಸಿಂಹರಾಜು ಮೇಲೆ ಮಸಿ ಬಳಿದು ಹಲ್ಲೆ ನಡೆಸಲಾಗಿದ್ದು, ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಫಿಲ್ಮ್ ಚೇಂಬರ್ ಬಳಿ ನರಸಿಂಹರಾಜು ಮುಖಕ್ಕೆ ಮಸಿ ಬಳಿದು ರಸ್ತೆಯಲ್ಲಿ ಶರ್ಟ್ ಹಿಡಿದು ಎಳೆದಾಡಿದ್ದಾರೆ. ವಾಟಾಳ್ ನಾಗರಾಜ್ ಮತ್ತು ಸಾರಾ ಗೋವಿಂದು ವಿರುದ್ಧ ನರಸಿಂಹರಾಜ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಾರಾ ಗೋವಿಂದು ಬೆಂಬಲಿಗರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಿರ್ಮಾಪಕ ನರಸಿಂಹರಾಜು ಅವರು ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.