ತೆಲಂಗಾಣ : ತೆಲುಗು ಖ್ಯಾತ ನಟ ವಿಜಯ್ ದೇವರಕೊಂಡ ಕಾರು ಅಪಘಾತವಾಗಿದೆ. ಪುಟ್ಟಪರ್ತಿಗೆ ಹೋಗಿ ಬರುವಾಗ ಈ ಒಂದು ಅಪಘಾತ ಸಂಭವಿಸಿದ್ದು, ತೆಲಂಗಾಣದ ಗದ್ವಾಲ್ ಜಿಲ್ಲೆಯ ಉಂಡವಳ್ಳಿ ಬಳಿ ಅಪಘಾತ ಸಂಭವಿಸಿದೆ. ಎಂದು ತಿಳಿದುಬಂದಿದೆ.
ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ಹೋಗುವಾಗ ಈ ಒಂದು ಅಪಘಾತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ವಿಜಯ್ ದೇವರಕೊಂಡ ಕಾರು ಡಿಕ್ಕಿ ಹೊಡೆದಿದೆ. ಮತ್ತೊಂದು ಕಾರಿನಲ್ಲಿ ದೇವರಕೊಂಡ ಹೈದರಾಬಾದ್ ಗೆ ತೆರಳಿದ್ದಾರೆ. ಸದ್ಯಕ್ಕೆ ಪ್ರಾಣಾಪಯದಿಂದ ವಿಜಯ ದೇವರಕೊಂಡ ಪಾರಾಗಿದ್ದಾರೆ. ಈಗಾಗಲೇ ಕನ್ನಡದ ಖ್ಯಾತ ನಟಿ ರಶ್ಮಿಕ ಮಂದಣ್ಣ ಅವರ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿರುವ ವಿಜಯ್ ದೇವರಕೊಂಡ ಅವರು ಮುಂದಿನ ವರ್ಷ ಫೆಬ್ರವರಿಯಲ್ಲಿ ಹಸೆಮಣೆ ಇರಲಿದ್ದಾರೆ.