ಮೈಸೂರು : ಐಪಿಎಲ್ 2025 ರಲ್ಲಿ ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿಗಾಗಿ ಮೈಸೂರಿನಲ್ಲಿ ಹೋಮ-ಹವನ ಮಾಡಲಾಗುತ್ತಿದೆ.
ಫೈನಲ್ ಗೆದ್ದು ಆರ್ ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವಂತೆ ಅಭಿಮಾನಿಗಳು ಮೈಸೂರಿನ ದೇವರಾಜ ಮೊಹಲ್ಲಾದ ಅಮೃತೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ನಾಳೆ ಅಹಮ್ಮದಾಬಾದ್ ನಲ್ಲಿ ಪಂಜಾಬ್ ವಿರುದ್ಧ ಫೈನಲ್ ಪಂದ್ಯ ನಡೆಯಲಿದ್ದು, ಆರ್ ಸಿಬಿ ಗೆಲುವಿಗಾಗಿ ಅಭಿಮಾನಿಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ.