ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ನಡುವೆ ನಟ ದರ್ಶನ್ ನೋಡಲು ಅಭಿಮಾನಿಗಳು ಬಳ್ಳಾರಿ ಸೆಂಟ್ರಲ್ ಜೈಲಿನ ಬಳಿ ಜಮಾಯಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ದಾಂಗುಡಿ ಇಟ್ಟಿದ್ದಾರೆ. ಸಿಕ್ಕ ಸಿಕ್ಕಲ್ಲಿ ಪೊಲೀಸರು ಲಾಠಿ ಬೀಸಿ ಅಭಿಮಾನಿಗಳನ್ನು ಓಡಿಸುತ್ತಿದ್ದಾರೆ.
ನಟ ದರ್ಶನ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇವಲ 6 ವಾರಗಳು ಮಾತ್ರ ಮಧ್ಯಂತರ ಜಾಮೀನು ನೀಡಲಾಗಿದ್ದು, 6 ವಾರಗಳ ಬಳಿಕ ಮತ್ತೆ ವಿಚಾರಣಾ ಕೋರ್ಟ್ ಗೆ ಹಾಜರಾಗಬೇಕು ಎಂದು ಕೋರ್ಟ್ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.