ಮೈಸೂರು : ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ರೈತ ರಾಜಶೇಖರ್ (58) ಸಾವನಪ್ಪಿದ್ದು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ಮಾಡಿದೆ.
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆನ್ನೆಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಖಂಡಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.








