ಹೈದ್ರಾಬಾದ್ : ಹೈದರಾಬಾದ್ ನಲ್ಲಿ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಸಿನಿಮಾ ವೀಕ್ಷಣೆ ವೇಳೆ ಕಾಲ್ತುಳಿತದಲ್ಲಿ ಮಹಿಳೆ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ನಟ ಅಲ್ಲು ಅರ್ಜುನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಜಾಮೀನು ಕುರಿತು ನಾಂಪಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು, ರೆಗ್ಯುಲರ್ ಬೇಲ್ ಅರ್ಜಿ ಸಲ್ಲಿಸಿದ್ದಾರೆ. ವಾದ ಮತ್ತು ಪ್ರತಿವಾದ ಆಲಿಸಿ, ನಾಂಪಲ್ಲಿ ಕೋರ್ಟ್ ಆದೇಶ ಕಾಯ್ದಿರಿಸಿತ್ತು. ಹಾಗಾಗಿ ಇಂದು ಜಾಮೀನು ಕುರಿತು ನಾಂಪಲ್ಲಿ ಕೋರ್ಟ್ ಆದೇಶ ಪ್ರಕಟಿಸಲಿದೆ.
ಸದ್ಯ ಅಲ್ಲು ಅರ್ಜುನ್ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಮಳೆ ಕಾಲ್ ತೋಳಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಅವರು ಅರೆಸ್ಟ್ ಆಗಿದ್ದರು ಬಳಿಕ ಹೈಕೋರ್ಟಿಗೆ ಗ್ರಾಮೀಣ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈ ಕೋರ್ಟ್ ಅಲ್ಲು ಅರ್ಜುನ್ ಗೆ ಮಧ್ಯಂತರ ಜಾಮೀನು ನೀಡಿತ್ತು.