ಉಡುಪಿ : ಕಳೆದ ಆಗಸ್ಟ್ 24ರಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಗೆ ಮಾದಕ ದ್ರವ್ಯ ನೀಡಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಉಡುಪಿಯ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಪ್ರಮುಖ ಆರೋಪಿ ಅಲ್ತಾಫ್ ಗೆ ಜಾಮೀನು ನೀಡಿ ಆದೇಶಸಿದೆ.
ಹೌದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಅಲ್ತಾಫ್ ಗೆ ನ್ಯಾಯಾಲಯದಿಂದ ಜಾಮೀನು ನೀಡಲಾಗಿದ್ದು, ಉಡುಪಿ ಜಿಲ್ಲಾ ಹೆಚ್ಚುವರಿ ಕೋರ್ಟಿನಿಂದ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ಆಗಸ್ಟ್ 24ರಂದು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಾಮೂಹಿಕ ಅತ್ಯಾಚಾರಕ್ಕೆ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಿಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹಿನ್ನೆಲೆಯಲ್ಲಿ ಇವತ್ತಿಯೂ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಪ್ರಮುಖ ಆರೋಪಿ ಅಲ್ತಾಫ್ ಗೆ ಉಡುಪಿ ಜಿಲ್ಲಾ ಕೋರ್ಟ್ ಜಾಮೀನು ನೀಡಿದೆ.