ಬೆಂಗಳೂರು : ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ಹೈಕೋರ್ಟ್ ವಿಸ್ತರಣೆ ಮಾಡಿ ವಿಚಾರಣೆಯನ್ನು ಫೆಬ್ರವರಿ 7 ಕ್ಕೆ ಮುಂದೂಡಿ ಆದೇಶ ಹೊರಡಿಸಿತು.
ಇಂದು ಹೈಕೋರ್ಟ್ ನಲ್ಲಿ ಎಚ್ ಡಿ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ, ದೋಷಾರೋಪ ನಿಗದಿಪಡಿಸದಂತೆ ನೀಡಿದ ಮಧ್ಯಂತರ ಆದೇಶವನ್ನು ಮತ್ತೆ ಹೈಕೋರ್ಟ್ ವಿಸ್ತರಣೆ ಮಾಡಿದೆ. ಮಧ್ಯಂತರ ಆದೇಶ ಫೆಬ್ರವರಿ 7ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಹೀಗಾಗಿ ಎಚ್ ಡಿ ರೇವಣ್ಣ ಅವರಿಗೆ ಇದೀಗ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಏನಿದು ಪ್ರಕರಣ?
ಹೆಚ್ಡಿ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಅವರ ಮನೆಯ ಸಹಾಯಕಿಯು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು. ಶಾಸಕರ ನಿವಾಸದಲ್ಲಿ ಹೆಚ್ಡಿ ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ. ಇನ್ನು ಕಿಡ್ನಾಪ್ ಕೇಸ್ನಲ್ಲಿ ಹೆಚ್ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರಾಗಿದೆ.ಈ ಪ್ರಕರಣವನ್ನು ರದ್ದು ಕೋರಿ ಹೆಚ್ಡಿ ರೇವಣ್ಣ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಇಂದು ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಫೆಬ್ರುವರಿ 7ಕ್ಕೆ ಒಂದುಡಿ ಆದೇಶ ನೀಡಿದೆ.