ಬಿಹಾರ : ಬಿಹಾರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಾರು,ಟ್ರ್ಯಾಕ್ಟರ್ ಡಿಕ್ಕಿಯಾಗಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದ ಕತಿಹಾರ್ ಬಳಿ ಕಾರು, ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.