ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಶಿವಮೊಗ್ಗ ತಾಲೂಕಿನ ಗಾಜನೂರು ಗ್ರಾಮದ ಬಳಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಬಳಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಕಂಡಕ್ಟರ್ ಅಣ್ಣಪ್ಪ (40) ಹಾಗೂ ಹರ್ಷಿತಾ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.