ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಲಿನ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಶಿವಮೊಗ್ಗ ಪಶ್ಚಿಮ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.