ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ತಂದೆಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೀಗೆಹಳ್ಳಿ ಗ್ರಾಮದ ನಾರಾಯಣ ಸ್ವಾಮಿ (40) ಮಕ್ಕಳಾದ ಪವತ್ (12) ಹಾಗೂ ನಿತಿನ್ (10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.