ಬೆಳಗಾವಿ : ಬೈಕ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘೋರ ದುರಂತ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ರಾಮು ಕರ್ಣಿ (49) ಹಾಗೂ ಮಗಳು ಜಾಹ್ನವಿ ಕರ್ಣಿ (11) ಎಂದು ತಿಳಿದುಬಂದಿದೆ. ಇನ್ನು ರಾಮು ಪತ್ನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಮಹಾರಾಷ್ಟ್ರದ ಜತ್ತ ತಾಲೂಕಿನ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಅನಂತಪುರ ಗ್ರಾಮದ ಸೋದರ ಸಂಬಂಧಿ ಮದುವೆಗೆ ಇವರು ಬಂದಿದ್ದರು. ಬೈಕಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಿಂದ ಪರಾರಿ ಆಗಿದ್ದಾನೆ. ಅಪಘಾತದ ಕುರಿತಿ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.