ಬಾಗಲಕೋಟೆ : ಹಿಟ್ & ರನ್ ಗೆ ತಂದೆ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ಜಿಲ್ಲೆಯಲ್ಲಿ ಸಂಭವಿಸಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗಳಿಗೆ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ತಂದೆ-ಮಗಳಿಬ್ಬರು ಮೃತಪಟ್ಟಿದ್ದಾರೆ.ತಂದೆ ಬಸವರಾಜ ಬಂಡಿವಡ್ಡರ್ (26) ಹಾಗೂ ಮಗಳು ಹುಲಿಗೆಮ್ಮ (3) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.