ಹಾಸನ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಸ್ ನಲ್ಲಿ ಹಿಟ್ ಆಂಡ್ ರನ್ ಗೆ ಮಾವ-ಅಳಿ ಬಲಿಯಾಗಿರುವ ಘಟನೆ ನಡೆದಿದೆ.
ಶೆಟ್ಟಿಹಳ್ಳಿ ಬೈಪಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ಮಧು (೩೫) ಹಾಗೂ ಬೇಲೂರು ತಾಲೂಕಿನ ದೇವಿನಹಳ್ಳಿ ನಿವಾಸಿ ಜವರಯ್ಯ (೬೫) ಎಂದು ಗುರುತಿಸಲಾಗಿದೆ.
ಶೆಟ್ಟಿಹಳ್ಳಿ ಬೈಪಾಸ್ ಬಳಿ ಕಾರು ಪಂಚರ್ ಆದಾಗ ಟೈರ್ ಬದಲಾಯಿಸುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಮಧು ಪತ್ನಿ ಗೀತಾ ಗಂಭೀರವಾಗಿ ಗಾಯಗೊಂಡಿದ್ದು, ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿಗೆ ಡಿಕ್ಕಿ ಹೊಡೆದು ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.