ರಾಮನಗರ : ತಂದೆಯೊಬ್ಬ ಸ್ವಂತ ಮಗನನ್ನೆ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ.
ಜಮೀನು ಮಾರಿದ ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ತಂದೆ ಸ್ವಂತ ಮಗನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ ತಂದೆ ಕೊಲೆಗೈದಿದ್ದಾನೆ. ಭಾಸ್ಕರ್ (31) ಕೊಲೆಯಾದ ಮಗ. ಆರೋಪಿ ಕೃಷ್ಣಪ್ಪನನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.