ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಯುಗಾದಿ ಹಬ್ಬದ ದಿನವೇ ಘೋರ ದುರಂತವೊಂದು ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ತಂದೆ-ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಳ್ಳಾಪುರ ತಾಲೂಕಿನ ಹುನೇಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ತಂದೆ ಮಗ ಸಾವನ್ನಪ್ಪಿದ್ದಾರೆ. ಮೃತರನ್ನು ಗಂಗಿರೆಡ್ಡಿ ಹಾಗೂ ಅವರ ಮಗ ಆದರ್ಶ್ ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂದೆ ಹೋಗುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಡಿವೈಎಸ್ ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.