ಕಲಬುರಗಿ : 10 ಸಾವಿರ ಲಂಚ ಸ್ವೀಕರಿಸುವಾಗ FDA ನೌಕರ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಹಸೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಎಫ್ ಡಿ ಎ ನೌಕರ ಶಶಿಕುಮಾರ್ ಲಂಚ ಸ್ವೀಕರಿಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಜಮೀನು ದಾಖಲೆ ನೀಡುವುದಕ್ಕೆ ಶಶಿಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. 10 ಸಾವಿರ ಲಕ್ಷ ಸ್ವೀಕರಿಸುವಾಗ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಕಿಶನ್ ರಾಥೋಡ್ ಎಂಬುವವರ ಬಳಿ ಶಶಿಕುಮಾರ್ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ. ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಸದ್ಯ ಶಶಿಕುಮಾರ್ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.








