BREAKING : ವೇಗವಾಗಿ ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದ ವಿದ್ಯಾರ್ಥಿನಿಯರು : ಅದೃಷ್ಟವಶಾತ್ ಬಚಾವ್!

ಮಂಗಳೂರು : ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ … Continue reading BREAKING : ವೇಗವಾಗಿ ಚಲಿಸುತ್ತಿದ್ದ ‘KSRTC’ ಬಸ್ ನಿಂದ ಬಿದ್ದ ವಿದ್ಯಾರ್ಥಿನಿಯರು : ಅದೃಷ್ಟವಶಾತ್ ಬಚಾವ್!