ಚಿತ್ರದುರ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಚಿತ್ರದುರ್ಗ ಜಿಲ್ಲೆಯಾಧ್ಯಂತ ಮಳೆ ಹೆಚ್ಚಾಗಿ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಶಾಲೆಗಳಿಗೆ ದಿನಾಂಕ:03/12/2024 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ದಿನಾಂಕ:03/12/2024 ರ ಇಂದು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದೆ. ಮುಂದಿನ ಎರಡು ಶನಿವಾರಗಳಂದು ಪೂರ್ಣ ತರಗತಿಗಳನ್ನು ನಡೆಸುವ ಮೂಲಕ ಸದರಿ ರಜೆಯನ್ನು ಸರಿದೂಗಿಸಲು ಸೂಚಿಸಿದೆ.