ಮೈಸೂರು : ಕಳೆದ ಮೂರು ವರ್ಷಗಳಲ್ಲಿ 4,011 ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಈ ವರ್ಷ ಖಾಲಿ ಇರುವ 8000 ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುತ್ತೇವೆ ಎಂದು ಪಿ ಎಸ್ ಐಗಳ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಮೈಸೂರಿನ ಪೊಲೀಸ್ ಅಕಾಡೆಮಿಯಲ್ಲಿ ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರು ಕರ್ತವದಲ್ಲಿ ಇದ್ದಾಗ ನಿಮ್ಮ ಕುಟುಂಬದ ಬಗ್ಗೆ ಯೋಚಿಸಬೇಡಿ. ಮನೆಯ ಸದಸ್ಯರ ಬಗ್ಗೆ ಯೋಚಿಸಬೇಡಿ. ನಿಮ್ಮ ರಕ್ಷಣೆಗೆ ಸರ್ಕಾರ ಇರುತ್ತದೆ. ಮಾದಕ ವಸ್ತು ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಸರ್ಕಾರದ ಸಂಕಲ್ಪವಾಗಿದೆ. ಪೊಲೀಸರು ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.
ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾರು ಡ್ರಗ್ಸ್ ತಯಾರಿಸುತ್ತಾರೆ, ಯಾರು ಡ್ರಗ್ಸ್ ಮಾರಾಟ ಮಾಡುತ್ತಾರೆ, ಎಂಬುವುದು ನಿಮಗೆ ಗೊತ್ತಿರುತ್ತದೆ. ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳಿಗೆ ಗೊತ್ತಿರುತ್ತದೆ. ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪೊಲೀಸರು ಸಜ್ಜಾಗಬೇಕು. ಪೊಲೀಸ್ ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಮಾಡಬೇಕು. ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಆದರೆ ಅಪರಾಧಿಗಳಿಗೆ ಕರುಣೆ ತೋರದೆ ನಿಷ್ಗುರವಾಗಿ ನಡೆದುಕೊಳ್ಳಿ. ಇತ್ತೀಚಿಗೆ ಸೈಬರ್ ಕ್ರೈಂ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.








