ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಬರುವ ವಸತಿ ಶಾಲೆಗಳು, ಏಕಲವ್ಯ ಮಾದರಿ ವಸತಿ ಶಾಲೆಗಳು ಹಾಗೂ ಇತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ನಡೆಸಲಾಗಿದ್ದ ಪರೀಕ್ಷೆಯ ಅಂತಿಮ ಅಂಕಪಟ್ಟಿ ಮತ್ತು ರ್ಯಾಂಕ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಕಟಿಸಿದೆ.
ಈ ಶಾಲೆಗಳ ಪ್ರವೇಶಕ್ಕಾಗಿ ದಿನಾಂಕ 01.03.2026 ರಂದು ಪರೀಕ್ಷೆ ನಡೆಸಲಾಗಿತ್ತು. ಮಾರ್ಚ್ 3 ರಂದು ಪ್ರಕಟಿಸಲಾದ ತಾತ್ಕಾಲಿಕ ಉತ್ತರಗಳಿಗೆ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ನಂತರ ಮಾರ್ಚ್ 7 ರಂದು ಪರಿಷ್ಕೃತ ಕೀ ಉತ್ತರ ಹಾಗೂ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಮಾರ್ಚ್ 18 ರವರೆಗೆ ಕಾಲಾವಕಾಶ ನೀಡಲಾಗಿತ್ತು.
ಅಂತಿಮ ಫಲಿತಾಂಶ
ಅಭ್ಯರ್ಥಿಗಳು ಸಲ್ಲಿಸಿದ ಎಲ್ಲ ಆಕ್ಷೇಪಣೆಗಳನ್ನು ತಜ್ಞರ ಸಮಿತಿಯಿಂದ ಪರಿಶೀಲಿಸಿದ ನಂತರ, ಈಗ ಅಂತಿಮ ಅಂಕಗಳನ್ನು ಮತ್ತು ರ್ಯಾಂಕ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಫಲಿತಾಂಶ ನೋಡುವುದು ಹೇಗೆ?
ಪರೀಕ್ಷೆ ಬರೆದ ಅಭ್ಯರ್ಥಿಗಳು ಮತ್ತು ಪೋಷಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ http://kea.kar.nic.in ಗೆ ಭೇಟಿ ನೀಡಿ ತಮ್ಮ ಅಂಕಗಳು ಮತ್ತು ರ್ಯಾಂಕ್ ವಿವರಗಳನ್ನು ಪರಿಶೀಲಿಸಬಹುದಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಅಥವಾ ತಾಂತ್ರಿಕ ನೆರವಿಗಾಗಿ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ 080 – 23 460 460 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.









