ಬಾಗಲಕೋಟೆ : ಸಿಐಡಿ ಅಧಿಕಾರಿಗಳು ಹಣಕಾಸಿನ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ಅವರನ್ನು ಬಂಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಬಲಾದಿ ಮಠದ ಸದಾಶಿವ ಸ್ವಾಮೀಜಿ ವಿರುದ್ಧ ಹಣಕಾಸಿನ ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸದಾಶಿವ ಸ್ವಾಮೀಜಿ ಅವರನ್ನು ಬಂಧಿಸಲಾಗಿದೆ.
76 ಕೋಟಿ ಹಣ ಪಡೆದು ವಂಚನೆ ಆರೋಪದಡಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸದಾಶಿವ ಸ್ವಾಮೀಜಿ ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಸುದೀರ್ಘ ವಿಚಾರಣೆ ಬಳಿಕ ಸ್ವಾಮೀಜಿ ಅವರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.