ಕಲಬುರಗಿ : ಎರಡು ಕೋಮುಗಳ ನಡುವೆ ಕೋಮು ಭಾವನೆಗೆ ಧಕ್ಕೆ ಉಂಟು ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕಲಬುರ್ಗಿಯ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಯಡ್ರಾಮಿಯಲ್ಲಿ ನಡೆದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದ ಸುದ್ದಿಗೋಷ್ಠಿಯಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಭಾವನೆ ಮೂಡಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಮಣಿಕಂಠ ರಾಠೋಡ ವಿರುದ್ದ ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡಿರುವ ಮಣಿಕಂಠ ರಾಠೋಡನ ವಿರುದ್ದ ಕ್ರಮ ಕೈಗೊಳ್ಳುವಂತೆ ರಜಾ ಅಕಾಡೆಮಿಯ ಕಾರ್ಯದರ್ಶಿ ಮುಹಮ್ಮದ್ ಖಯಾಮ್ ಅಲಿ ಅವರು, ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.