ಬೆಂಗಳೂರು: ತುಳುನಾಡಿನ ದೈವಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕರಾವಳಿ ತುಳುನಾಡಿ ದೈವಕ್ಕೆ ನಟ ರಣವೀರ್ ಸಿಂಗ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ರಣವೀರ್ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ವಕೀಲ ಪ್ರಶಾಂತ್ ಮೆಥಾಲ್ ನ್ಯಾಯಾಲಯ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಬೆಂಗಳೂರು ನಗರದ ಒಂದನೇ ಎಸಿಜೆಎಂ ಕೋರ್ಟ್ ರಣವೀರ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಲು ಸೂಚನೆ ನೀಡಿದೆ. ಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ನಟ ರಣವೀರ್ ಸಿಂಗ್ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಘಟನೆ ಹಿನ್ನೆಲೆ
ಗೋವಾದಲ್ಲಿ ನಡೆದ ಚಿತ್ರೋತ್ಸವದಲ್ಲಿ ನಟ ರಣವೀರ್ ಸಿಂಗ್ ವಾದ ಒಂದನ್ನು ಮಾಡಿಕೊಂಡಿದ್ದರು. ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ಅವರು ಯಡವಟ್ಟು ಮಾಡಿಕೊಂಡಿದ್ದರು. ರಿಷಬ್ ಶೆಟ್ಟಿ ಅವರ ನಟನೆಯನ್ನು ಹೊಗಳಲು ಮುಂದಾಗಿ ರಣವೀರ್ ಸಿಂಗ್ ಅವರು ಕಾಂತಾರ ಚಿತ್ರದ ದೈವವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಕ್ಷಮೆ ಕೇಳಿದ್ದ ರಣವೀರ್ ಸಿಂಗ್
ರಣವೀರ್ ಅವರು ನಡೆದುಕೊಂಡ ರೀತಿಗೆ ಸಾಕಷ್ಟು ಟೀಕೆಗಳು ಕೇಳಿ ಬಂದ ಬೆನ್ನಲ್ಲೇ ರಣವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದರು. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಕಾಂತಾರಾ ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು ಎಂದು ಹೇಳಿದ್ದರು.
Daivaradhana is a pious custom of Tulu Nadu. Ranveer Singh has disrespected it and hurt the sentiments of millions of believers. He should apologise to both believers and Daiva. Shocking that Rishab Shetty didn't try to stop. #ShameOnYouRanveerSinghpic.twitter.com/NLW74SG5vy
— Ganesh (@me_ganesh14) December 2, 2025








