ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಆರೋಪ ಕೇಳಿ ಬಂದಿದೆ.
ಇದಲ್ಲದೇ ದೂರುದಾರ ಮಹಿಳೆ ವಿರುದ್ದ ಅನುಮಾನಗಳು ಹುಟ್ಟಿಕೊಂಡಿದ್ದು, ದೂರುದಾರ ಮಹಿಳೆ ಈಗಾಗಲೇ ಹಲವು ದೂರುಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಉದ್ಯಮಿ, ರಾಜಕಾರಣಿಗಳು ಸೇರಿದಂಥೆ ಹಲವು ಮಂದಿ ಕೂಡ ಮಹಿಳೆ ದೂರು ನೀಡಿದ್ದು, ಒಟ್ಟಿನಲ್ಲಿ ಘಟನೆ ಸಂಬಂಧ ಸತ್ಯಾಂಶವನ್ನು ಕಂಡು ಹಿಡಿಯಲು ಸರಿಯಾದ ತನಿಖೆ ಬಳಿಕ ಮಾತ್ರ ಎಲ್ಲವು ತಿಳಿದು ಬರಲಿದೆ.
ಇನ್ನೂ ಸದ್ಯಕ್ಕೆ ನೀಡಿರುವ ದೂರಿನ ಬಗ್ಗೆ ತನಿಖೆ ನಡೆದಾಗ ಸತ್ಯ ಸತ್ಯತೆ ಹೊರಬರಲಿದೆ.