ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಶಿವಮೊಗ್ಗ ನಗರದ ಕೋಟೆ ಠಾಣೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ ಕೃಷ್ಣದಾಸ್ ಅವರ ಬಂಧನ ಖಂಡಿಸಿ ಶಿವಮೊಗ್ಗ ಮಥುರಾ ಪ್ಯಾರಡೈಸ್ ಮುಂಭಾಗದ ನಡೆದ ಪ್ರತಿಭಟನಾ ಸಭೆ ವೇಳೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ, ದ್ವೇಷ ಭಾವನೆ ಮೂಡುವಂತೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
’ಮುಸ್ಲಿಮರು ಅನ್ನ ಹಾಕಿದ ಮನೆಗೆ ಕನ್ನ ಹಾಕುವ ರಕ್ತದವರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ಅದು ಮನದಟ್ಟಾಗುತ್ತದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.