ಮೈಸೂರು : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲೆ ಫೆ.10ರಂದು ಮುಸ್ಲಿಂ ಯುವಕರ ಗುಂಪು ದಾಂಧಲೆ ನಡೆಸಿತ್ತು. ಈ ಪ್ರಕರಣದ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ಆರೋಪಿಸಿ ಮೈಸೂರು ಯುವ ಕಾಂಗ್ರೆಸ್ ಮುಖಂಡ ಸೈಯದ್ ಅಬ್ರರ್ ನೀಡಿದ ದೂರಿನ ಅನ್ವಯ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.