ಬೆಂಗಳೂರು : ಗರ್ಭಿಣಿ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕನ್ನಡದ ಕಿರುತೆರೆ ನಟ ಸನ್ನಿ ಮಹಿಪಾಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ನಟ ಸನ್ನಿ ಮಹಿಪಾಳ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ವಿಜ್ಞಾನನಗರದ ಮನೆಯಲ್ಲಿ ಪತಿ ಮೇಲೆ ಸನ್ನಿ ಮಹಿಪಾಲ್ ಹಲ್ಲೆ ನಡೆಸಿ, ಚಾಕುವಿನಿಂದ ಇರಿದಿದ್ದಾರೆ’ ಎಂದು ಆರೋಪಿಸಿ ಯುವತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಯುವತಿ ಜತೆ ಸನ್ನಿ ಮಹಿಪಾಲ್ ಜೂನ್ 15ರಂದು ದೇವಾಲಯವೊಂದರಲ್ಲಿ ಮದುವೆಯಾದ ಬಳಿಕ ಸನ್ನಿ ಅಂತರ ಕಾಯ್ದು ಕೊಂಡಿದ್ದರು. ಜತೆಗೆ ಬೇರೊಬ್ಬ ಯುವತಿ ಜತೆ ನಿಶ್ಚಿತಾರ್ಥ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು, ಈ ಬಗ್ಗೆ ಕೇಳಿದ ಪತ್ನಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.