ಯಾದಗಿರಿ : ರಾಜ್ಯದಲ್ಲಿ ಮೈಕ್ರೋ ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಯಾದಗಿರಿಯಲ್ಲಿ ವಿಧವೆ ಮಹಿಳೆ ಮನೆ ಸೀಜ್ ಮಾಡಿ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು, ಸಾಲದ ಕಂತು ಕಟ್ಟಲಾಗದ ವಿಧವೆ ಮಹಿಳೆಯ ಮನೆ ಜಪ್ತಿ ಮಾಡಿದ ಮೈಕ್ರೋ ಫೈನಾನ್ಸ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಯಾದಗಿರಿ ತಾಲೂಕಿನ ಯಡಹಳ್ಳಿ ಗ್ರಾಮದ ಗೀತಮ್ಮ ಎಂಬುವರ ಮನೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಜಪ್ತಿ ಮಾಡಿದ್ದರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಸೂಚನೆ ಮೇರೆಗೆ ಪೊಲೀಸರು ತಕ್ಷಣವೇ ಮೈಕ್ರೋ ಫೈನಾನ್ಸ್ ವಿರುದ್ಧ ಪ್ರಕರಣ ದಾಖಲಿಸಿ ಮನೆಯ ಬೀಗ ತೆರೆಸಿದ್ದಾರೆ. ಘಟನೆ ಸಂಬಂಧ ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.