ಸಕಲೇಶಪುರ : ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಾಗಿದೆ.
ಜನವರಿ 9 ರಂದು ಸಕಲೇಶಪುರದಲ್ಲಿ ವಿರಾಟ್ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಚೋದನಕಾರಿ ಭಾಷಣ ಹಿನ್ನೆಲೆಯಲ್ಲಿ ಸಕಲೇಶಪುರ ಠಾಣೆಗೆ ಸಿಬ್ಬಂದಿ ಎಂ.ಕೆ. ಶ್ರೀಧರ್ ದೂರು ನೀಡಿದ್ದು, ಪ್ರಮೋದ್ ಮುತಾಲಿಕ್ ಸೇರಿ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.